ಅಶ್ಲೀಲ ಭಾಷೆಯ ನೀತಿ

ನಮ್ಮ ರಚನೆಕಾರರು, ವೀಕ್ಷಕರು ಹಾಗೂ ಪಾಲುದಾರರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ. ಈ ಅನನ್ಯ ಮತ್ತು ಉತ್ಸಾಹಶೀಲ ಸಮುದಾಯವನ್ನು ರಕ್ಷಿಸಲು ನಿಮ್ಮಲ್ಲಿ ಪ್ರತಿಯೊಬ್ಬರಿಂದಲೂ ಸಹಾಯವನ್ನು ನಿರೀಕ್ಷಿಸುತ್ತೇವೆ. ನಮ್ಮ ಸಮುದಾಯ ಮಾರ್ಗಸೂಚಿಗಳನ್ನು, ಮತ್ತು YouTube ಅನ್ನು ಸುರಕ್ಷಿತವಾಗಿರಿಸುವ ನಮ್ಮ ಹಂಚಿಕೊಂಡ ಜವಾಬ್ದಾರಿಯಲ್ಲಿ ಅವುಗಳು ನಿರ್ವಹಿಸುವ ಪಾತ್ರವನ್ನು ನೀವು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ಕೆಳಗಿನ ನೀತಿಯನ್ನು ಎಚ್ಚರಿಕೆಯಿಂದ ಓದಲು ಸಮಯ ತೆಗೆದುಕೊಳ್ಳಿ. ನಮ್ಮ ಮಾರ್ಗಸೂಚಿಗಳ ಸಂಪೂರ್ಣ ಪಟ್ಟಿಗಾಗಿ ನೀವು ಈ ಪುಟವನ್ನು ಸಹ ನೋಡಬಹುದು.

ಕೆಲವು ಮಾತುಗಳು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವೀಕ್ಷಕರಿಗೆ ಸೂಕ್ತವಲ್ಲದಿರಬಹುದು.

ಈ ನೀತಿಯನ್ನು ಉಲ್ಲಂಘಿಸುವ ಕಂಟೆಂಟ್ ನಿಮಗೆ ಕಂಡುಬಂದರೆ, ಅದರ ಕುರಿತು ವರದಿ ಮಾಡಿ. ನಮ್ಮ ಸಮುದಾಯ ಮಾರ್ಗಸೂಚಿಗಳ ಉಲ್ಲಂಘನೆಗಳ ಕುರಿತು ವರದಿ ಮಾಡಲು ಸೂಚನೆಗಳು ಇಲ್ಲಿ ಲಭ್ಯವಿವೆ. ನೀವು ವರದಿ ಮಾಡಲು ಬಯಸುವಂತಹ ಕೆಲವು ವೀಡಿಯೊಗಳು ಅಥವಾ ಕಾಮೆಂಟ್‌ಗಳು ನಿಮಗೆ ಕಂಡುಬಂದರೆ, ನೀವು ಚಾನಲ್ ಅನ್ನು ವರದಿ ಮಾಡಬಹುದು.

ಈ ನೀತಿ ನಿಮ್ಮ ಮೇಲೆ ಹೇಗೆ ಪ್ರಭಾವ ಬೀರಲಿದೆ

ನೀವು ಕಂಟೆಂಟ್ ಅನ್ನು ಪೋಸ್ಟ್ ಮಾಡುತ್ತಿರುವಿರಿ ಎಂದಾದರೆ

ಈ ನೀತಿಯನ್ನು ಉಲ್ಲಂಘಿಸುವ ಅಶ್ಲೀಲ ಕಂಟೆಂಟ್, ವಯಸ್ಸಿನ ನಿರ್ಬಂಧ, ಕಂಟೆಂಟ್ ತೆಗೆದುಹಾಕುವಿಕೆ ಅಥವಾ ಸ್ಟ್ರೈಕ್‌ಗೆ ಕಾರಣವಾಗಬಹುದು. ಕಂಟೆಂಟ್‍ನ ಮೇಲೆ ವಯಸ್ಸಿನ-ನಿರ್ಬಂಧ ವಿಧಿಸಬೇಕೇ ಅಥವಾ ಕಂಟೆಂಟ್ ಅನ್ನು ತೆಗೆದುಹಾಕಬೇಕೇ ಅಥವಾ ಸ್ಟ್ರೈಕ್ ವಿಧಿಸಬೇಕೇ ಎಂಬುದನ್ನು ತೀರ್ಮಾನಿಸುವಾಗ ನಾವು ಈ ಕೆಳಗಿನ ಅಂಶಗಳನ್ನು ಪರಿಗಣಿಸಬಹುದು.

  • ಲೈಂಗಿಕವಾಗಿ ಅಶ್ಲೀಲ ಭಾಷೆ ಅಥವಾ ನಿರೂಪಣೆಗಳ ಬಳಕೆ
  • ಕಂಟೆಂಟ್‌ನಲ್ಲಿ ಅತಿಯಾದ ಅಸಭ್ಯ ಭಾಷೆಯ ಬಳಕೆ 
  • ಕಂಟೆಂಟ್‌ನ ಶೀರ್ಷಿಕೆ, ಥಂಬ್‌ನೇಲ್ ಅಥವಾ ಸಂಬಂಧಿತ ಮೆಟಾಡೇಟಾದಲ್ಲಿ ಅತಿಯಾದ ಬೈಗುಳ ಅಥವಾ ಲೈಂಗಿಕವಾಗಿ ಪ್ರಚೋದಕ ಪದಗಳ ಬಳಕೆ
  • ಅತಿಯಾದ ಲೈಂಗಿಕ ಧ್ವನಿಗಳ ಬಳಕೆ

ಗಮನಿಸಿ: ಮೇಲೆ ಕೊಟ್ಟಿರುವುದು ಸಂಪೂರ್ಣ ಪಟ್ಟಿಯಲ್ಲ.

ವಯೋಮಾನ ನಿರ್ಬಂಧಿತ ಕಂಟೆಂಟ್

ವಯಸ್ಸಿನ ನಿರ್ಬಂಧ ವಿಧಿಸಬಹುದಾದ ಕಂಟೆಂಟ್‌ನ ಕೆಲವೊಂದು ಉದಾಹರಣೆಗಳು ಹೀಗಿವೆ:
  • ಅಸಭ್ಯ ಭಾಷೆಯ ಬಳಕೆಯ ಮೇಲೆ ಗಮನ ಕೇಂದ್ರೀಕರಿಸಿದ ವೀಡಿಯೊ, ಉದಾಹರಣೆಗೆ ಸಂದರ್ಭವನ್ನು ಮೀರಿದ ಸಂಯೋಜನೆ, ಹಾಡು ಅಥವಾ ಕ್ಲಿಪ್
  • ಶೀರ್ಷಿಕೆಯಲ್ಲಿ ಅತಿಯಾದ ಅಸಭ್ಯ ಭಾಷೆಯನ್ನು ಬಳಸುವ ವೀಡಿಯೊ 
  • ಪುನರಾವರ್ತಿತವಾಗಿ ಅಶ್ಲೀಲ ಅಥವಾ ಲೈಂಗಿಕ ಭಾಷೆಯನ್ನು ಬಳಸುವ ವೀಡಿಯೊ

ಈ ನೀತಿಯು ವೀಡಿಯೊಗಳು, ವೀಡಿಯೊ ವಿವರಣೆಗಳು, ಕಾಮೆಂಟ್‌ಗಳು, ಲೈವ್ ಸ್ಟ್ರೀಮ್‌ಗಳು ಮತ್ತು ಇತರ ಯಾವುದೇ YouTube ಉತ್ಪನ್ನ ಅಥವಾ ಫೀಚರ್‌ಗಳಿಗೆ ಅನ್ವಯಿಸುತ್ತದೆ. ನೆನಪಿಡಿ, ಇವುಗಳು ಕೇವಲ ಕೆಲವು ಉದಾಹರಣೆಗಳಾಗಿವೆ, ಮತ್ತು ಕಂಟೆಂಟ್, ಈ ನೀತಿಯನ್ನು ಉಲ್ಲಂಘಿಸುತ್ತದೆ ಎಂದು ನೀವು ಭಾವಿಸಿದರೆ, ಅದನ್ನು ಪೋಸ್ಟ್ ಮಾಡಬೇಡಿ.

ಅಶ್ಲೀಲ ಭಾಷೆಯ ಉದ್ದೇಶವು ಶೈಕ್ಷಣಿಕ, ಡಾಕ್ಯುಮೆಂಟರಿ, ವೈಜ್ಞಾನಿಕ ಅಥವಾ ಕಲಾತ್ಮಕವಾಗಿದ್ದರೆ ಮತ್ತು ಅದು ಅನಗತ್ಯವಾಗಿರದಿದ್ದರೆ ನಾವು ಅದನ್ನು ಅನುಮತಿಸಬಹುದು. ಉದಾಹರಣೆಗೆ, ಹಾಡಿನ ಶೀರ್ಷಿಕೆಯು ಒಂದು ಕೆಟ್ಟ ಪದವಾಗಿರುವುದು ಅಥವಾ ಹಾಡಿನಲ್ಲಿ ದೊಡ್ಡ ಪ್ರಮಾಣದ ಅಸಭ್ಯ ಭಾಷೆ ಇರುವುದು. ಕಂಟೆಂಟ್, ಶೀರ್ಷಿಕೆ ಮತ್ತು ವಿವರಣೆಯಲ್ಲಿ ಸಾಂದರ್ಭಿಕ ಮಾಹಿತಿ ಒದಗಿಸಿದರೆ, ವೀಡಿಯೊದ ಉದ್ದೇಶವನ್ನು ನಿರ್ಧರಿಸಲು ನಮಗೆ ಮತ್ತು ನಿಮ್ಮ ವೀಕ್ಷಕರಿಗೆ ಸಹಾಯವಾಗುತ್ತದೆ ಎಂಬುದನ್ನು ಮರೆಯಬೇಡಿ.

ಕಂಟೆಂಟ್, ಈ ನೀತಿಯನ್ನು ಉಲ್ಲಂಘಿಸಿದರೆ ಏನಾಗುತ್ತದೆ

ನಿಮ್ಮ ಕಂಟೆಂಟ್ ಈ ನೀತಿಯನ್ನು ಉಲ್ಲಂಘಿಸಿದರೆ, ನಾವು ಕಂಟೆಂಟ್ ಅನ್ನು ತೆಗೆದುಹಾಕುತ್ತೇವೆ ಮತ್ತು ನಿಮಗೆ ತಿಳಿಸಲು ಇಮೇಲ್ ಕಳುಹಿಸುತ್ತೇವೆ. ನೀವು ಪೋಸ್ಟ್ ಮಾಡಿದ ಲಿಂಕ್ ಸುರಕ್ಷಿತವಾಗಿದೆ ಎಂದು ದೃಢೀಕರಿಸಲು ನಮಗೆ ಸಾಧ್ಯವಾಗದಿದ್ದರೆ, ನಾವು ಲಿಂಕ್ ಅನ್ನು ತೆಗೆದುಹಾಕಬಹುದು. ವೀಡಿಯೊದಲ್ಲಿ ಅಥವಾ ವೀಡಿಯೊ ಮೆಟಾಡೇಟಾದಲ್ಲಿ ಪೋಸ್ಟ್ ಮಾಡಲಾದ ಉಲ್ಲಂಘನೀಯ URL ಗಳು ವೀಡಿಯೊವನ್ನು ತೆಗೆದುಹಾಕಲು ಕಾರಣವಾಗಬಹುದು ಎಂಬುದನ್ನು ಗಮನಿಸಿ.

ಇದೇ ಮೊದಲ ಬಾರಿ ನೀವು ನಮ್ಮ ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದರೆ, ನಿಮ್ಮ ಚಾನಲ್‌ಗೆ ಯಾವುದೇ ದಂಡನೆಯಿಲ್ಲದೆ, ನೀವು ನಮ್ಮಿಂದ ಎಚ್ಚರಿಕೆಯನ್ನು ಸ್ವೀಕರಿಸಬಹುದು. ಪಾಲಿಸಿ ತರಬೇತಿಯನ್ನು ತೆಗೆದುಕೊಂಡು 90 ದಿನಗಳ ನಂತರ ಎಚ್ಚರಿಕೆಯ ಅವಧಿ ಮುಗಿಯಲು ಅನುಮತಿಸುವ ಅವಕಾಶ ನಿಮಗೆ ಇರುತ್ತದೆ. ಆದರೂ, ಆ 90 ದಿನಗಳ ಅವಧಿಯೊಳಗೆ ಅದೇ ನೀತಿಯನ್ನು ಉಲ್ಲಂಘಿಸಿದರೆ, ಎಚ್ಚರಿಕೆಯ ಅವಧಿ ಮುಗಿಯುವುದಿಲ್ಲ ಮತ್ತು ನಿಮ್ಮ ಚಾನಲ್‌ಗೆ ಸ್ಟ್ರೈಕ್ ನೀಡಲಾಗುತ್ತದೆ. ತರಬೇತಿಯನ್ನು ಪೂರ್ಣಗೊಳಿಸಿದ ನಂತರ, ನೀವು ಬೇರೆ ನೀತಿಯನ್ನು ಉಲ್ಲಂಘಿಸಿದರೆ, ನಿಮಗೆ ಮತ್ತೊಂದು ಎಚ್ಚರಿಕೆ ಸಿಗುತ್ತದೆ.

90 ದಿನಗಳ ಒಳಗೆ ನೀವು 3 ಸ್ಟ್ರೈಕ್‌ಗಳನ್ನು ಪಡೆದರೆ, ನಿಮ್ಮ ಚಾನಲ್ ಅನ್ನು ಕೊನೆಗೊಳಿಸಲಾಗುವುದು. ನಮ್ಮ ಸ್ಟ್ರೈಕ್‌ಗಳ ವ್ಯವಸ್ಥೆಯ ಕುರಿತು ಇನ್ನಷ್ಟು ತಿಳಿಯಿರಿ.

ಸಮುದಾಯ ಮಾರ್ಗಸೂಚಿಗಳು ಅಥವಾ ಸೇವಾ ನಿಯಮಗಳ ಪುನರಾವರ್ತಿತ ಉಲ್ಲಂಘನೆಗಳಿಗಾಗಿ ನಿಮ್ಮ ಚಾನಲ್ ಅಥವಾ ಖಾತೆಯನ್ನು ನಾವು ಕೊನೆಗೊಳಿಸಬಹುದು. ತೀವ್ರ ದುರುಪಯೋಗದ ಏಕೈಕ ಪ್ರಕರಣದ ನಂತರ ಅಥವಾ ನಿಯಮಾವಳಿ ಉಲ್ಲಂಘನೆಯಾಗುವುದಕ್ಕೆ ಚಾನಲ್ ಸಮರ್ಪಿತವಾಗಿದ್ದಾಗಲೂ ಸಹ ನಿಮ್ಮ ಚಾನಲ್ ಅನ್ನು ನಾವು ಕೊನೆಗೊಳಿಸಬಹುದು. ಪುನಃ ಪುನಃ ಈ ಉಲ್ಲಂಘನೆ ಮಾಡುವವರನ್ನು, ಭವಿಷ್ಯದಲ್ಲಿ ಈ ಪಾಲಿಸಿ ತರಬೇತಿಯನ್ನು ತೆಗೆದುಕೊಳ್ಳದ ಹಾಗೆ ನಾವು ತಡೆಯಬಹುದು. ಚಾನಲ್ ಅಥವಾ ಖಾತೆ ಕೊನೆಗೊಳಿಸುವಿಕೆಯ ಕುರಿತು ಇನ್ನಷ್ಟು ತಿಳಿಯಿರಿ.

ಇದು ಸಹಾಯಕವಾಗಿದೆಯೇ?

ಇದನ್ನು ನಾವು ಹೇಗೆ ಸುಧಾರಿಸಬಹುದು?
Search
ಹುಡುಕಾಟ ತೆರವುಗೊಳಿಸಿ
ಹುಡುಕಾಟ ಮುಚ್ಚಿ
ಪ್ರಮುಖ ಮೆನು
16898681671628576566
true
ಸಹಾಯ ಕೇಂದ್ರವನ್ನು ಹುಡುಕಿ
true
true
true
true
true
59
false
false